ಧಾರವಾಡ: ಟೆಂಪೋ ಟ್ರಾವೆಲರ್- ಟಿಪ್ಪರ್ ನಡುವೆ ಭೀಕರ ಅಪಘಾತ, 12 ಮಹಿಳೆಯರು ಸೇರಿ 13 ಮಂದಿ ದುರ್ಮರಣ
ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 12 ಮಂದಿ ಮಹಿಳೆಯರು ಸೇರಿದಂತೆ ಓರ್ವ ಟಿಪ್ಪರ್ ಚಾಲಕ ಸೇರಿ ಒಟ್ಟು 13 ಮಂದಿ ಮೃತಪಟ್ಟಿದ್ದಾರೆ. ಇನ್ನು ಈ ಭೀಕರ ಅಪಘಾತ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಮಹಿಳೆಯರಿದ್ದ ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ವೇಳೆ ಟಿಪ್ಪರ್‌ವೊಂದು ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ