ಬೆಂಗಳೂರು: ಹಿರಿಯ ಪತ್ರಕರ್ತ ರವಿ ಬೆಳಗೆರೆಯವರು ತಡ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 62 ವರ್ಷದ ರವಿ ಬೆಳಗೆರೆಯವರಿಗೆ ಮಧ್ಯರಾತ್ರಿ ಸುಮಾರು 12 ಗಂಟೆಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ, ಕೂಡಲೇ ಸ್ಥಳೀಯ ಖಾಸಗೀ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಕರಿಷ್ಮಾ ಹಿಲ್ಸ್ ನಲ್ಲಿರುವ ರವಿಬೆಳಗೆರೆ ನಿವಾಸಕ್ಕೆ ಪಾರ್ಥಿವ ಶರೀರವನ್ನು ಶಿಫ್ಟ್ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅವರಿಗೆ ಮೊದಲ ಪತ್ನಿಯಿಂದ ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಮತ್ತು ಎರಡನೇ ಪತ್ನಿಯಿಂದ ಒಬ್ಬ ಪುತ್ರನಿದ್ದು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.