ಚಿತ್ರದುರ್ಗ : ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಒಟ್ಟು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು ಒಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಮತ್ತು ಬಾಲೆನಹಳ್ಳಿ ಮದ್ಯೆ ನಡೆದಿದೆ. ಮೃತ ಕಾರು ಚಾಲಕ ಪ್ರಭಾಕರ್ (38), ವೇಣು (20), ನಾಗವೇಣಿ (45) ಮೃತರು ಎಂದು ಗುರುತಿಸಲಾಗಿದೆ.ವಿಶಾಲಮ್ಮ ಗಾಯಗೊಂಡಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಚಳ್ಳಕೆರೆ ತಾಲೂಕಿನ ಕರಿಕೆರೆ ಗ್ರಾಮದವರು ಎಂದು ಗುರುತಿಸಲಾಗಿದೆ. ಇವರು ಚಳ್ಳಕೆರೆಯಿಂದ ಬೆಂಗಳೂರು ಕಡೆ ಹೋಗುವ ಹಿರಿಯೂರು ಕಡೆಯಿಂದ ಬಂದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮವಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿದ ಸ್ಥಳಕ್ಕೆ ಪಿಎಸ್ಐ ಪರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.