ಬೆಂಗಳೂರು : ಕಳೆದ ನಾಲ್ಕು ತಿಂಗಳ ಹಿಂದೆದಷ್ಟೆ ರಾಜ್ಯಸಭಾ ಬಿಜೆಪಿಯಿಂದ ಆಯ್ಕೆಯಾಗಿದ್ದ “ಅಶೋಕ್ ಗಸ್ತಿ ಕೊರೊನಾ ಸೋಂಕಿನಿಂದ” ಇಂದು ಖಾಸಗಿ ಆಸ್ಪತ್ರೆಯಲ್ಲಿ ಮೃತ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕೊರೊನಾ ಸೋಂಕಿಗೆ ಒಳಗಾಗಿದ್ದ 55 ವರ್ಷದ ಅಶೋಕ್ ಗಸ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾನ್ಹ ವೇಳೆಯಲ್ಲಿ ನಿಧನರಾಗಿದ್ದಾರೆ.
ಮೂಲತಃ ರಾಯಚೂರು ಜಿಲ್ಲೆ ಲಿಂಗಸೂರಿನವರಾದ ಅಶೋಕ್ ಗಸ್ತಿ ಸವಿತಾ ಸಮಾಜಕ್ಕೆ ಸೇರಿದ್ದವರು. ಬಿಜೆಪಿಯ ಕಟ್ಟಾಳುವಾಗಿದ್ದರು,
ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್‍ನಲ್ಲಿ ನಡೆಯಬೇಕಿದ್ದ ಚುನಾವಣೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಾಗಿದ್ದ ಅಶೋಕ್ ಗಸ್ತಿ ಮತ್ತು ಈರಣ್ಣ ಕರಡಿ ಅವರನ್ನು ಕಣಕ್ಕಿಳಿಸಿತ್ತು. ಅಶೋಕ್ ಗಸ್ತಿ ಇಂದು ನಿಧನ ಹೊಂದಿದ್ದಾರೆ.