ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಬಿಎನ್. ಚಂದ್ರಪ್ಪ ಅವರನ್ನು ಕಾಂಗ್ರೆಸ್ ವಕ್ತಾರರಾಗಿ ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಇತ್ತಿಚಿನ ದಿನಗಳಲ್ಲಿ ದೃಶ್ಯ ಮುದ್ರಣ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳು ಸಾರ್ವಜನಿಕವಾಗಿ ಮಹತ್ವದ ಪಾತ್ರವಹಿಸುತ್ತವೆ. ಮಾಧ್ಯಮಗಳಲ್ಲಿ ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಿರುವುದು ಅತ್ಯಂತ ಅವಶ್ಯಕವಾಗಿದೆ ಎಂದು ಡಿಕೆಶಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತಮಗಿರುವ ಅನುಭವ ತಿಳಿವಳಿಕೆ ಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಕುಲಂಕುಶವಾಗಿ ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ನಿಮ್ಮನ್ನು ಕೆಪಿಸಿಸಿ ವಕ್ತಾರರಾಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ. ಈ ಜವಾಬ್ದಾರಿಯನ್ನು ವಹಿಸಿಕೊಂಡು ಕೆಪಿಸಿಸಿಯ ಸಂವಹನ ಮತ್ತು ಮಾಧ್ಯಮ ಮುಖ್ಯಸ್ಥರು ನೀಡುವ ಸಲಹೆ ಸೂಚನೆ ಮತ್ತು ಮಾರ್ಗದರ್ಶನಗಳ ಮೇಲೆ ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು ಎಂದು ಈ ಆದೇಶ ಪತ್ರದಲ್ಲಿ ಕೋರಲಾಗಿದೆ.
ಚಿತ್ರದುರ್ಗ ಭಾಗದ ಅತ್ಯಂತ ಸರಳ ರಾಜಕಾರಣಿಗಳಲ್ಲಿ ಒಬ್ಬರಾದ ಮಾಜಿ ಸಂಸದ ಬಿಎನ್ ಚಂದ್ರಪ್ಪ ಕೂಡ ಒಬ್ಬರಾಗಿದ್ದಾರೆ. 2019 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿ ಎ. ನಾರಾಯಣ ಸ್ವಾಮಿ ವಿರುದ್ಧ ಸೋಲು ಅನುಭವಿಸಿದ್ದರು. ಸೋತೆ ಎಂಬ ಪದವನ್ನು ಬಿಟ್ಟು ಸೋಲಿಗೆ ದೃತಿಗೆಡದೆ ಚಂದ್ರಪ್ಪ ಪಕ್ಷದ ಕಾರ್ಯಕ್ರಮಗಳಲ್ಲಿ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಸಂಚರಿಸಿ, ಸಮಸ್ಯೆಗೆ ಸ್ಪಂದಿಸುತಿದ್ದಾರೆ. ಕೋವಿಡ್ ಸಮಯದಲ್ಲಿ ಇತರೆ ಜಿಲ್ಲೆಗಳಲ್ಲಿ ಸಂಚರಿಸಿ ಕಾಂಗ್ರೆಸ್ ಪಕ್ಷದಿಂದ ವಿತರಿಸಿದ “ಆರೋಗ್ಯ ಹಸ್ತ” ಕಿಟ್ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷ ಸಂಘಟನೆ ಒತ್ತು ಕೊಟ್ಟು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸುತಿದ್ದಾರೆ.