ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನ.

ಬಾಗಲಕೋಟೆ: ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾ ನಗರದಲ್ಲಿರುವ ಚಿತ್ರನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ.

ಮನೆಯ ಯಾರು ಇಲ್ಲದ ವೇಳೆ ಮನೆಯ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದ ಪೋಲಿಸರು ಸ್ಥಳಕ್ಕೆ ದೌಡಾಯಿಸಿದ ಸಿಪಿಐ ಕರುಣೇಸಿಗೌಡ ಮತ್ತು ಪಿಎಸ್‌ಐ ವಿಜಯಕುಮಾರ ಕಾಂಬಳೆ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Send this to a friend