ಅಧಿಕಾರಕ್ಕಾಗಿ ಸದಸ್ಯೆಯನ್ನು ಕೈ ಹಿಡಿದು ಎಳೆದಾಡಿದ ಶಾಸಕ ಸಿದ್ದು ಸವದಿ ; ವಿಡಿಯೋ ವೈರಲ್

ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂಬಂಧ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಸದಸ್ಯೆಯನ್ನು ಕೈ ಹಿಡಿದು ಎಳೆದಾಡಿ, ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ್ದಾರೆ. ಮಹಾಲಿಂಗಪುರ ಪುರಸಭೆ ಸಂಬಂಧ ಸೋಮವಾರ ನಡೆದ ಚುನಾವಣೆ ಸಂದರ್ಭದಲ್ಲಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಮಹಿಳೆಯೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳಲಾಗಿದೆ. ಚುನಾವಣೆಯಲ್ಲಿ ಮತ ಚಲಾಯಿಸಲು ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರು ಮತ ಚಲಾವಣೆ ಮಾಡಲು ತೆರಳುತ್ತಿದ್ದರು. ಈ ವೇಳೆ ಸವಿತಾ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ತೆರಳುತ್ತಿದ್ದಾರೆ ಎಂಬ ಮಾಹಿತಿ ಪಡೆದ ಶಾಸಕರು, ಸದಸ್ಯೆಯನ್ನು ಎಳೆದಾಡಿ ಗೂಂಡಾ ವರ್ತನೆ ತೋರಿದ್ದಾರೆ

Leave a Reply

Your email address will not be published. Required fields are marked *

Send this to a friend