ಕೊರೊನಾ ನಿಯಂತ್ರಣಕ್ಕೆ ಕೋತಿಗಳಿಗೆ ಬಾಳೆಹಣ್ಣು ಕೊಟ್ಟ ಆರೋಗ್ಯ ಸಚಿವ ಶ್ರೀರಾಮುಲು.

ಬಳ್ಳಾರಿ : ರಾಜ್ಯದಲ್ಲಿ ಕೊರೊನಾ ನಿಯಂತ್ರಣವಾಗಲಿ ಎಂದು ಹಂಪಿ ಬಳಿಯ ಯಂತ್ರೋದ್ಧಾರಕ ಆಂಜನೇಯ ದೇವಾಲಯದ ಹತ್ತಿರ ಆರೋಗ್ಯ ಸಚಿವ ಶ್ರೀರಾಮುಲು ಕೋತಿಗಳಿಗೆ ಬಾಳೆಹಣ್ಣು ನೀಡಿದ್ದಾರೆ.

ರಾಜ್ಯದಲ್ಲಿ ಸಿಎಂ ಬಿಎಸ್​ವೈ  ಕೊರೊನಾ ವಿರುದ್ಧ ಹೋರಾಟ ಮಾಡಲು ಶ್ರೀರಾಮುಲು ಅವರಿಗೆ ಅಧಿಕಾರ ನೀಡಿ 173 ದಿನಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಲಿ ಎಂಬ ಉದ್ದೇಶದಿಂದ ಸಚಿವರು ವಿವಿಧ ದೇವಾಲಯಗಳಲ್ಲಿ ಪೂಜಾ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಅದರ ಜೊತೆ ಕೋತಿಗಳಿಗೆ ಬಾಳೆ ಹಣ್ಣು ವಿತರಿಸುವ ಕಾರ್ಯ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಚಿವರ ಆತ್ಮೀಯರು ಇದ್ದರು.

Leave a Reply

Your email address will not be published.

Send this to a friend