ಬಳ್ಳಾರಿ : ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನಗರವನ್ನು ಸಚಿವ ಸಂಪುಟದಲ್ಲಿ ಅಸ್ತು ಎಂದಿದ್ದಾರೆ.ಈ ಕುರಿತು ಮಾತನಾಡಿರುವ ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿದರೆ ಮುಂದಿನ ಚುನಾವಣೆಯಲ್ಲಿ ಜನರೇ ಬಿಜೆಪಿ ತಕ್ಕ ಪಾಠ ಕಲಿಸುತ್ತಾರೆ ಎಂದು ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ಸಿಎಂ ತಾತ್ವಿಕ ಒಪ್ಪಿಗೆ ನೀಡಿದ ವಿಚಾರವಾಗಿ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್ ರೆಡ್ಡಿ, ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ನನ್ನ ಬೆಂಬಲ ಇಲ್ಲ ಎಂದಿದ್ದಾರೆ.
ರಾಜ್ಯ ಸರ್ಕಾರ ಇಂತಹ ನಿರ್ಣಯ ಕೈಗೊಳ್ಳಬಾರದಿತ್ತು. ಜನರು ಈ ಬಗ್ಗೆ ಹೋರಾಟ ಮಾಡುತ್ತಾರೆ. ನನಗೆ ಪಕ್ಷ ಮುಖ್ಯ ಅಲ್ಲ, ನನಗೆ ಜನರೇ ಮುಖ್ಯ. ಜನರು ಹೋರಾಟ ಮಾಡಿದರೆ ನಾನೂ ಜನರ ಪರವಾಗಿ ಹೋರಾಟಕ್ಕೆ ಇಳಿಯುವೆ ಎಂದು ಸಿಎಂ ವಿರುದ್ಧ ಸೋಮಶೇಖರ್ ರೆಡ್ಡಿ ಗುಡುಗಿದ್ದಾರೆ.