ಬಿಬಿಎಂಪಿ 198 ವಾರ್ಡ್ ಗಳಿಗೆ ಚುನಾವಣೆ; ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್ ಗಳಿಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ.
ಈ ಕುರಿತಾಗಿ ರಾಜ್ಯ ಸರ್ಕಾರ ನಾಲ್ಕು ವಾರಗಳಲ್ಲಿ ಮೀಸಲು ಅಂತಿಮ‌ ಅಧಿಸೂಚನೆ ಹೊರಡಿಸಬೇಕು, ಆನಂತರ ಆರು ವಾರಗಳಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.

ಹೈಕೋರ್ಟ್ ಆದೇಶದಿಂದಾಗಿ ಬಿಬಿಎಂಪಿ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಮೀಸಲಾತಿ ಪಟ್ಟಿ ಪ್ರಕಟವಾದಂತ 6 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬಿಬಿಎಂಪಿ ಚುನಾವಣೆ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ಸಾಧ್ಯತೆ ಇದೆ.

Leave a Reply

Your email address will not be published.

Send this to a friend