ಗೋವಾದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರನ ಅದ್ಧೂರಿ ಮದುವೆ.

ಗೋವಾ: ಬೆಳಗಾವಿ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಪುತ್ರ, ರಾಜ್ಯ ಯುವ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಮೃಣಾಲ್​ ಮತ್ತು ಭದ್ರಾವತಿಯ ಬಿ.ಕೆ.ಶಿವಕುಮಾರ್​ ಅವರ ಪುತ್ರಿ ಡಾ.ಹಿತಾ ಇವರ ವಿವಾಹ ಗೋವಾದ ಲೀಲಾ ಪ್ಯಾಲೇಸ್ ಹೋಟೆಲ್​ನಲ್ಲಿ ಅದ್ಧೂರಿಯಾಗಿ ಜರುಗಿತು.
ಈ ಮದುವೆಯ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್​ ಮುಖಂಡರಾದ ಈಶ್ವರ್ ಖಂಡ್ರೆ, ಯು.ಟಿ.ಖಾದರ್​ ಸೇರಿದಂತೆ ನೂರಾರು ಗಣ್ಯರು ಭಾಗಿಯಾಗಿ ನವ ವಧು ವರರಿಗೆ ಶುಭ ಹಾರೈಸಿದ್ದಾರೆ.

Leave a Reply

Your email address will not be published.

Send this to a friend