ನನ್ನ ಸಾವಿಗೆ ನಾನೇ ಕಾರಣ; ಬರೆದಿಟ್ಟು ನೇಣಿಗೆ ಶರಣಾದರು ನಿವೃತ್ತ ಪ್ರೊಫೆಸರ್.

ಬೆಂಗಳೂರು: ಬೆಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಮೈಕೋಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಬೆಂಗಳೂರು ಯೂನಿವರ್ಸಿಟಿಯಲ್ಲಿ ಕೆಲಸ ಮಾಡುತ್ತಿದ್ದ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ತಾವು ವಾಸವಿದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೂ ಮುನ್ನ ಬರೆದಿದ್ದ ಡೆತ್ ನೋಟ್ ಸಿಕ್ಕಿದೆ.

ಅದರಲ್ಲಿ ನಿವೃತ್ತ ಪ್ರೊಫೆಸರ್ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದುಕೊಂಡಿದ್ದಾರೆ. ಮೈಕೋಲೇಔಟ್ ಪೊಲೀಸರಿಂದ ಪ್ರಕರಣ ದಾಖಲಾಗಿದೆ..

Leave a Reply

Your email address will not be published. Required fields are marked *

Send this to a friend