ಬೆಂಗಳೂರು: ನಗರದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ. 2014ರ KPSC ಬ್ಯಾಚ್ ಡಿವೈಎಸ್ಪಿ ಲಕ್ಷ್ಮಿ (33) ನೇಣಿಗೆ ಶರಣಾದ ಅಧಿಕಾರಿ.
ಲಕ್ಷ್ಮಿ ಅವರು 2017ರಲ್ಲಿ ಡಿವೈಎಸ್ಪಿಯಾಗಿ ನೇಮಕಗೊಂಡಿದ್ದರು. ಸದ್ಯ ಸಿಐಡಿ ಡಿಎಸ್ಪಿಯಾಗಿ ಕೆಲಸ ಮಾಡ್ತಿದ್ದರು. ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಕ್ಷ್ಮಿ ಕಳೆದ ರಾತ್ರಿ ಸ್ನೇಹಿತರ ಮನೆಗೆ ಊಟಕ್ಕೆ ಬಂದಿದ್ದರು ಎನ್ನಲಾಗಿದೆ. ಬಳಿಕ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಈ ಕುರಿತು ತನಿಖೆ ಆ