ಬೆಂಗಳೂರು: ಉಪಚುನಾವಣೆಯ ತಯಾರಿಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಸಿಬಿಐ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ. ಸೋಮವಾರ ಬೆಳ್ಳಿಗೆಯೇ ಡಿಕೆಶಿ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ಬೆಂಗಳೂರಿನ ಸದಾಶಿವ ನಗರದ ನಿವಾಸದ ಮೇಲೆ ಐವರು ಅಧಿಕಾರಿಗಳ ತಂಡವು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಸಹೋದರ ಡಿಕೆ ಸುರೇಶ್ ಮನೆ ಮೇಲೂ ಸಿಬಿಐ ದಾಳಿ ಮಾಡಿದೆ.
ಈ ಹಿಂದೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಡಿಕೆಶಿ ವಿಚಾರಣೆ ಎದುರಿಸಿದ್ದರು. ಅಲ್ಲದೆ, ಬಂಧನಕ್ಕೆ ಒಳಗಾಗಿ ಜೈಲು ವಾಸವನ್ನು ಅನುಭವಿಸಿ, ಜಾಮೀನಿನ ಮೂಲಕ ಹೊರಬಂದಿದ್ದಾರೆ. ಇದೀಗ ಸಿಬಿಐ ಅಧಿಕಾರಿಗಳು ದಾಳಿ ಮಾಡಿರುವುದು ಡಿಕೆಶಿ ಮತ್ತೊಮ್ಮೆ ಶಾಕ್ ಎದುರಾಗಿದೆ.