ಕಲಬುರಗಿ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಲು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ಭೇಟಿ ನೀಡಿದ್ದು ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಬಗ್ಗೆ ಕಲಬುರಗಿಯಲ್ಲಿ ಮಾತನಾಡಿದ ಸಿಎಂ, ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂದುಕೊಂಡಿದ್ದೇನೆ ಎಂದು ಹೇಳಿದರು. ಕೇಂದ್ರದ ವರಿಷ್ಠರು ಯಾವ ರೀತಿಯಾಗಿ ಸೂಚನೆ ನೀಡುತ್ತಾರೆ ನೋಡಬೇಕಿದೆ. ಸಂಪುಟ ವಿಸ್ತರಣೆ ವಿಚಾರವಾಗಿ ಇಂದು ದೆಹಲಿಗೆ ಭೇಟಿ ನೀಡಿ ಮೋದಿ ಮತ್ತು ಸಚಿವರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ಮೋದಿ ಸೇರಿದಂತೆ ಅನೇಕರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಂಪುಟದಿಂದ ಸಾಹೇಬರನ್ನು ಕೈಬಿಡು ವಿಚಾರವಾಗಿ ಮಾತನಾಡಿದ ಸಿಎಂ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರ ಅಭಿಪ್ರಾಯ ತೆಗೆದುಕೊಂಡು ನಂತರ ತಿರ್ಮಾನ ಮಾಡಲಾಗುತ್ತದೆ. ದೆಹಲಿಗೆ ಹೋದ ಮೇಲೆ ನಾಳೆ ಈ ಕುರಿತು ಚರ್ಚೆ ನಡೆಯಲಿದೆ ಎಂದು ಸಿಎಂ ಬಿಎಸ್ವೈ ತಿಳಿಸಿದರು.