ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ತಿಂಗಳು 11ರಂದು ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದರು.