ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದುಕೊಂಡ ಹಿನ್ನೆಲೆಯಲ್ಲಿ ನಗರಸಭೆಯಲ್ಲಿ ಅಧಿಕಾರ ಹಿಡಿದಿದ್ದಾರೆ.
ಅಧ್ಯಕ್ಷ ಸ್ಥಾನ ಎಸ್ ಸಿ. ಮಹಿಳೆಗೆ ಮೀಸಲು ಬಂದಿದ್ದರಿಂದ ಇಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಜಯಲಕ್ಷ್ಮಿ ಅವರು 17 ಮತ ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ “ಜೈ ತುಂಬಿ” ಇವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಚಳ್ಳಕೆರೆ ನಗರಸಭೆಯಲ್ಲಿ ಒಟ್ಟು 31 ವಾರ್ಡ್ ಗಳಿದ್ದು 16 ರಲ್ಲಿ ಕಾಂಗ್ರೆಸ್, 10 ರಲ್ಲಿ ಜೆಡಿಎಸ್, 04 ರಲ್ಲಿ ಬಿಜೆಪಿ ಜಯಗಳಿಸಿದ್ದರು. ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದುಕೊಂಡಿದ್ದು ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಚಿತ್ರದುರ್ಗ ಉಪವಿಭಾಗಾಧಿಕಾರಿ ಪ್ರಸನ್ನ ಅವರ ನೇತೃತ್ವದಲ್ಲಿ ಚುನಾವಣೆ ನಡೆದಿದೆ. ನಗರಸಭಾ ಅಧ್ಯಕ್ಷರು ಹಾಗೂ ಸದಸ್ಯರು
ಶಾಸಕ ಟಿ. ರಘುಮೂರ್ತಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.
ಜೆಡಿಎಸ್ ದೂರು : ಜೆಡಿಎಸ್ 10 ಹಾಗೂ ಬಿಜೆಪಿ 04 ಸದಸ್ಯರು ಒಂದಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಪರಾಭವಗೊಂಡಿದ್ದು, ನಂತರ ಇವರು ಸರ್ವೋಚ್ಚನ್ಯಾಯಲಯದ ಆದೇಶದಂತೆ 02/11/2020 ರೊಳಗೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯನ್ನು ನಡೆಸುವಂತೆ ಸ್ಪಷ್ಟ ಆದೇಶವಿದ್ದರೂ ಜಿಲ್ಲಾಡಳಿತ ದಿನಾಂಕ 03/11/ 2020 ರಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದವರ ಆಯ್ಕೆಯನ್ನು ರದ್ದುಪಡಿಸುವಂತೆ ಕೋರಿ ಚುನಾವಣಾಧಿಕಾರಿ ಪ್ರಸನ್ನ ರವರಿಗೆ ಮನವಿ ಸಲ್ಲಿಸಿದ್ದಾರೆ.