ಚಳ್ಳಕೆರೆ: ಸುಮಾರು 200 ಮಹಿಳೆಯರ ಮೊಬೈಲ್ ನಂಬರ್ ಸಂಗ್ರಹಿಸಿಕೊಂಡು ಅವರ ವಾಟ್ಸಪ್‍ಗೆ ನಂಬರ್ ಗೆ ಅಶ್ಲೀಲ ಫೋಟೋಗಳನ್ನು ಕಳುಹಿಸುತ್ತಿದ್ದ ವ್ಯಕ್ತಿ ಇದೀಗ ಪೋಲಿಸರ ಅತಿಥಿಯಾಗಿದ್ದಾನೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ತ್ಯಾಗರಾಜ ನಗರದ ಓ.ರಾಮಕೃಷ್ಣ (54) ಎಂಬ ವ್ಯಕ್ತಿ ಮಹಿಳೆಯರಿಗೆ ವಾಟ್ಸಪ್ ನಲ್ಲಿ ಪೋಟೋ ಕಳುಹಿಸುತ್ತಿದ್ದ ವ್ಯಕ್ತಿಯಾಗಿದ್ದಾನೆ. ಇತನ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿದ ಚಳ್ಳಕೆರೆ ಪೊಲೀಸರು ರಾಮಕೃಷ್ಣನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಂಧನಕ್ಕೊಳಪಟ್ಟಿರುವ ರಾಮಕೃಷ್ಣ, ಸುಮಾರು 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸಿರುವುದಾಗಿ ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಆದರೆ ಮರ್ಯಾದೆಗೆ ಅಂಜಿ ಯಾರೂ ದೂರು ನೀಡಲು ಮುಂದೆ ಬಂದಿರಲಿಲ್ಲ ಎನ್ನಲಾಗಿದೆ. ಇತನ ಬಗ್ಗೆ ಕಾರ್ಯಪ್ರವೃತ್ತರಾದ ಚಳ್ಳಕೆರೆ ಪೊಲೀಸರು ಆತನ ಮೊಬೈಲ್ ಟವರ್ ಲೊಕೇಶನ್ ಪತ್ತೆಹಚ್ಚಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.