ಚಿತ್ರದುರ್ಗ : ಇಟ್ಟಿಗೆ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ರೇಖಲಗೆರೆ ಗ್ರಾಮದ ಬಳಿ ಘಟನೆ ನಡೆದಿದೆ. ಮೃತರು ಮೊಳಕಾಲ್ಮೂರು ತಾಲೂಕಿನ ಯರೇನಹಳ್ಳಿ ಎಂದು ತಿಳಿದು ಬಂದಿದೆ. ಬಸವರಾಜ (24), ಶಶಿಕುಮಾರ್ (23) ಮೃತರು ಎಂದು ಗುರುತಿಸಲಾಗಿದೆ. ಮತ್ತೊಬ್ಬ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಬಸವರಾಜ ಕಳೆದ ಆರು ತಿಂಗಳ ಹಿಂದೆ ಅಷ್ಟೇ ಮದುವೆ ಆಗಿರುವುದು ತಿಳಿದು ಬಂದಿದೆ. ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿದ ತಕ್ಷಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಯಕನಹಟ್ಟಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.