ಚಿತ್ರದುರ್ಗ : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 110 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,033 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 34, ಚಳ್ಳಕೆರೆ 19, ಹಿರಿಯೂರು 18, ಹೊಳಲ್ಕೆರೆ 3, ಹೊಸದುರ್ಗ 16, ಮೊಳಕಾಲ್ಮುರು ತಾಲ್ಲೂಕಿನಲ್ಲಿ 08 ಹಾಗೂ ಹೊರ ಜಿಲ್ಲೆಯ 12 ಪ್ರಕರಣಗಳು ಸೇರಿದಂತೆ ಒಟ್ಟು 110 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 11 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು 2412 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 110 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 16,033ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 70 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 15,444 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 519 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,28,122 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 3,93,329 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,75,361 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1230 ಜನರ ವರದಿ ಬರುವುದು ಬಾಕಿ ಇದೆ. 705 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕಂತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.