ಚಿತ್ರದುರ್ಗ : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 197 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,231ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 59, ಚಳ್ಳಕೆರೆ 22, ಹಿರಿಯೂರು 08, ಹೊಸದುರ್ಗ 47, ಮೊಳಕಾಲ್ಮುರು 33 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 28 ಸೇರಿದಂತೆ ಒಟ್ಟು 197 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 37 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಒಟ್ಟು 545 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 197 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 5,231ಕ್ಕೆ ಏರಿಕೆಯಾಗಿದ್ದು, ಇದುವರೆಗೆ 33 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 3,811 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,385 ಸಕ್ರಿಯ ಪ್ರಕರಣಗಳು ಇವೆ.ಸದ್ಯ ಜಿಲ್ಲೆಯಲ್ಲಿ ಒಟ್ಟು 922 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 34,651 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 49,382 ಜನರ ಮಾದರಿ ಸಂಗ್ರಹಿಸಲಾಗಿದ್ದು, 43,138 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 560 ಜನರ ವರದಿ ಬರುವುದು ಬಾಕಿ ಇದೆ. 453 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.