ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 24 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,105 ಕ್ಕೆ ಏರಿಕೆಯಾಗಿದೆ.ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 18 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಒಟ್ಟು 1829 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 24 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 14,105 ಕ್ಕೆ ಏರಿಕೆಯಾಗಿದೆ. ಒಟ್ಟು 68 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 13,858 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 179 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,13,115 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 1,99,400 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,84,267 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 431 ಜನರ ವರದಿ ಬರುವುದು ಬಾಕಿ ಇದೆ. 597 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.