ಚಿತ್ರದುರ್ಗದಲ್ಲಿ ಮೂರು ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತ ಪ್ರಕರಣಗಳು.

ಚಿತ್ರದುರ್ಗ : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 149 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,045 ಕ್ಕೆ ಏರಿಕೆಯಾದಂತಾಗಿದೆ.ಚಿತ್ರದುರ್ಗ ತಾಲ್ಲೂಕಿನಲ್ಲಿ 38,  ಹಿರಿಯೂರು-22, ಚಳ್ಳಕೆರೆ-23, ಮೊಳಕಾಲ್ಮುರು 39, ಹೊಸದುರ್ಗ 24 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 03 ಸೇರಿದಂತೆ ಒಟ್ಟು 149 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 42 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 809 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 149 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 3,045 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

Send this to a friend