ಏಕಲವ್ಯ ಪ್ರಶಸ್ತಿಗೆ ಭಾಜನರಾದ ಚಿತ್ರದುರ್ಗದ ವಿ. ರಾಧಾ

ಚಿತ್ರದುರ್ಗ ( ಆಗಸ್ಟ್ ೨೮) : ಕೋಟೆ ನಾಡು ಚಿತ್ರದುರ್ಗದ ವಿದ್ಯಾರ್ಥಿನಿಯೊಬ್ಬಳು
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಏಕಲವ್ಯ ಪ್ರಶಸ್ತಿ ದೊರೆತಿದೆ. ಅಂದಹಾಗೆ ಚಿತ್ರದುರ್ಗ ಜಿಲ್ಲೆಯ ಬೊಮ್ಮಸಂದ್ರ ಗ್ರಾಮದ ವಿದ್ಯಾರ್ಥಿನಿ ಬೆಂಗಳೂರಿನ ಕೆ ಆರ್ ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿರುವ ವಿ. ರಾಧಾ ಅವರು ಏಕಲವ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಈ ಪ್ರಶಸ್ತಿ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಕರ್ನಾಟಕ ಸರ್ಕಾರವು ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾಪಟುಗಳಿಗೆ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ಏಕಲವ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಈ ಪ್ರಶಸ್ತಿಗೆ ವಿದ್ಯಾರ್ಥಿನಿ ವಿ. ರಾಧ ಆಯ್ಕೆಗೊಂಡಿದ್ದಾರೆ.

ಪ್ರಶಸ್ತಿ ಪ್ರದಾನ : 2020ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಭಾಜನರಾಗಿರುವಂತ ವಿ. ರಾಧ ಅವರಿಗೆ 29 ರಂದು ಸೋಮವಾರ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಾಧಾ ಹಾಗೂ ಕುಟುಂಬದ ಸದಸ್ಯರು ಸೇರಿದಂತೆ ಸ್ನೇಹಿತರು ಮೂವರು ಜನ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.

Leave a Reply

Your email address will not be published.

Send this to a friend