ಚಿತ್ರದುರ್ಗ: ಕೇಂದ್ರ ಸರ್ಕಾರ ರೈತರ ವಿರೋಧಿ ಕಾಯ್ದೆಗಳ ಕೂಡ ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕ್ರಮ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಮಹಾತ್ಮಾಗಾಂಧಿ ಹುತಾತ್ಮ ದಿನಾಚರಣೆ ಅಂಗವಾಗಿ ರೈತ ಮುಖಂಡರು ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಎಪಿಎಂಸಿ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ಕೃಷಿ ಕಾನೂನು ರದ್ದು ಗೊಳಿಸುವಂತೆ ಕೃಷಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ರೆ ಕೇಂದ್ರ ಸರ್ಕಾರ ರೈತ ಮಾತ್ರ ರೈತರ ಪರವಾಗಿ ಮಾತನಾಡದೆ ಹೋರಾಟಗಾರರಿಗೆ ಭಯೋತ್ಪಾದಕರ ಪಟ್ಟ ಕಟ್ಟಲು ಹೊರಟಿದ್ದಾರೆ ಎಂದು ಪ್ರತಿಭಟನಾಕಾರು ದೂರಿದರು.
ಇನ್ನು ರಾಷ್ಟ ರಾಜಧಾನಿಯಲ್ಲಿ ಕಳೆದ 2 ತಿಂಗಳಿನಿಂದ ರೈತರು ಹೋರಾಟ ಮಾಡುತ್ತಿದ್ದಾರೆ. ಇದುವರಿಗೂ ಸರ್ಕಾರ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಆದ್ರೆ ರೈತ ಮಾರಕ ಕಾನೂನು ಹಿಂಪಡೆಯಲು ಮುಂದಾಗುತ್ತಿಲ್ಲ ಎಂದು ರೈತ ಸಂಘಟನೆ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.