ಚಿತ್ರದುರ್ಗ : ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು ತಾಲೂಕಿನಲ್ಲಿ ನಾಳೆ ಎರಡನೇ ಹಂತದ ಮತದಾನ ನಡೆಯಲಿದ್ದು ಚುನಾವಣಾ ಆಯೋಗ ಭರ್ಜರಿ ಸಿದ್ಧತೆ ಮಾಡಿಕೊಂಡು, ಅಧಿಕಾರಿಗಳು ಚುನಾವಣಾ ಸಾಮಾಗ್ರಿಗಳೊಂದಿಗೆ ಮತಗಟ್ಟೆಗೆ ತೆರಳಿದ್ದಾರೆ. ನಾಳೆ ಬೆಳಿಗ್ಗೆ ಏಳು ಗಂಟೆಗೆಯಿಂದ ಸಂಜೆ ಐದು ಗಂಟೆಯವರೆಗೆ ಮತದಾನ ನಡೆಯಲಿದ್ದು ಅಭ್ಯರ್ಥಿಗಳ ಜಿದ್ದಾಜಿದ್ದಿನ ಹೋರಾಟ ನಡೆಯಲಿದೆ. ಹಿರಿಯೂರು ತಾಲ್ಲೂಕಿನಲ್ಲಿ ಒಟ್ಟು 33 ಗ್ರಾಮ ಪಂಚಾಯಿತಿಗಳಿದ್ದು, 590 ಸ್ಥಾನಗಳಲ್ಲಿ, ಇದರಲ್ಲಿ 90 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಒಂದು ಸ್ಥಾನಕ್ಕೆ ನಾಮಪತ್ರ ಸಲ್ಲಿಸಿಲ್ಲ. 499 ಸ್ಥಾನಗಳಿಗೆ ಚುನಾವಣೆ ನಡೆದಿದ್ದು 1382 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1208 ಚುನಾವಣಾ ಸಿಬ್ಬಂದಿಗಳು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 300 ಮತಗಟ್ಟೆ ಸ್ಥಾಪಿಸಿದ್ದಾರೆ.
ಚಳ್ಳಕೆರೆ ತಾಲೂಕಿನಲ್ಲಿ 40 ಗ್ರಾಮ ಪಂಚಾಯಿತಿಗಳಿದ್ದು, 755 ಒಟ್ಟು ಸ್ಥಾನಗಳಿವೆ. ಇದರಲ್ಲಿ 68 ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 02 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಆಗಿಲ್ಲ. 675 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 7156 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 361 ಮತಗಟ್ಟೆ ಸ್ಥಾಪಿಸಿದ್ದಾರೆ.
ಮೊಳಕಾಲ್ಮೂರು ತಾಲೂಕಿನಲ್ಲಿ ಒಟ್ಟು 16 ಗ್ರಾಮ ಪಂಚಾಯಿತಿಗಳಿದ್ದು, 323 ಒಟ್ಟು ಸದಸ್ಯ ಸ್ಥಾನಗಳಿವೆ. ಇದರಲ್ಲಿ 31 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 01 ಸ್ಥಾನಕ್ಕೆ ನಾಮಪತ್ರ ಸಲ್ಲಿಸಿಲ್ಲ. 291 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 689 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. 162 ಮಾತುಗಳನ್ನು ಸ್ಥಾಪಿಸಿದ್ದಾರೆ.
ಕೊವಿಡ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಚುನಾವಣೆ ನಡೆಸಲು ಕ್ರಮಕೈಗೊಳ್ಳಲಾಗಿದೆ. ಸ್ಯಾನಿಟೇಸರ್, ಮಾಸ್ಕ್ ಇತರೆ ಸಾಮಾಗ್ರಿಗಳನ್ನು ಸಿದ್ದಪಡಿಸಿಕೊಳ್ಹಲಾಗಿದೆ. ಈಗಾಗಲೇ ಚುನಾವಣಾ ಅಧಿಕಾರಿಗಳು ಮತಗಟ್ಟೆ ಬಳಿ ತೆರಳಿದ್ದು, ಮತದಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.