ಚಿತ್ರದುರ್ಗ ಸರಳವಾಗಿ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆ

ಚಿತ್ರದುರ್ಗ : ಕೋಟೆ ನಾಡು ಚಿತ್ರದುರ್ಗದ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮ ಅತ್ಯಂತ ಸರಳವಾಗಿ, ಯಶಸ್ವಿಯಾಗಿ ನಡೆದಿದೆ. ಪ್ರತಿ ವರ್ಷ ಬೆಳಿಗ್ಗೆ 11 ಕ್ಕೆ ಆರಂಭವಾಗಬೇಕಿದ್ದ ಶೋಭಾಯಾತ್ರೆ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ಶೋಭಾಯಾತ್ರೆ ಪ್ರಾರಂಭವಾಯಿತು. ಈ ಶೋಭಾಯಾತ್ರೆಗೆ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಗರದ ಓಬವ್ವ ಸ್ಟೇಡಿಯಂ ರಸ್ತೆಯ ಎಂಎಂ ಪ್ರೌಢಶಾಲೆ ಆವರಣದ ವೇದಿಕೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ವೇದಿಕೆಯಿಂದ ಆರಂಭವಾದ ಶೋಭಾಯಾತ್ರೆ ನಗರದ ಮುಖ್ಯ ರಸ್ತೆಯಾದ ಬಿಡಿ ರಸ್ತೆ, ಆಸ್ಪತ್ರೆ ಮುಂಭಾಗ, ಮದಕರಿ ಸರ್ಕಲ್, ಅಂಬೇಡ್ಕರ್ ಸರ್ಕಲ್, ಎಸ್ ಜೆಎಂ ಸರ್ಕಲ್, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತದ ಮೂಲಕ ಕನಕ ಸರ್ಕಲ್ ನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಪ್ರತಿ ವರ್ಷದಂತೆ ಡಿಜೆ ಸೌಂಡ್, ಕರಡಿ ವಾದ್ಯ, ವೀರಗಾಸೆ, ಕೋಲಾಟ, ನೃತ್ಯ ಹೊಲಗ, ತಮಟೆ ವಾದ್ಯ ಮತ್ತಿತರ ವಾದ್ಯಗಳು ತುಂಬಿ ತುಳುಕುತ್ತಿದ್ದವು. ಆದರೆ ಈ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ನಾದಸ್ವರ ಅಳವಡಿ ಮಾಡಲಾಗಿತ್ತು.
ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ವಾದ್ಯ ವೃಂದ ಮತ್ತು ಡಿಜೆ ಸೌಂಡ್ ಗೆ ಕುಣಿದು ಕುಪ್ಪಳಿಸಿ ಬೇಕಾಗಿದ್ದ ಹುಡುಗ, ಹುಡುಗರಿಗೆ ಬಾರಿ ನೀರಾಸೆ ಉಂಟಾಗಿತ್ತು. ಲಕ್ಷ, ಲಕ್ಷ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕಿದ್ದ ಕಾರ್ಯಕ್ರಮದ ಅತಿ ಕಡಿಮೆ ಜನಸಂಖ್ಯೆ ಭಾಗವಹಿಸಿದ್ದರು. ಜೊತೆಗೆ ಈ ವರ್ಷ ಅತ್ಯಂತ ಸರಳವಾಗಿ ಶೋಭಾಯಾತ್ರೆ ನಡೆಸುವುದಾಗಿ ಆಯೋಜಕರು ತಿಳಿಸಿದ್ದರು. ನಗರದಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದವು. ನಗರದ ಎಲ್ಲಡೆ ಬಣ್ಣದ ಚಿತ್ತಾರ ಮೂಡುತ್ತಿತ್ತು. ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಿ ಶೃಂಗಾರವಾಗಬೇಕಿದ್ದ ನಗರ ಈ ಬಾರಿ ಕಂಗೋಳಿಸಲಿಲ್ಲ. ಈ ಸಲ ಪ್ರಮುಖ ರಸ್ತೆಯ
ವಿವಿಧ ಸರ್ಕಲ್ ಗಳಲ್ಲಿ ಇರುವ ಪ್ರತಿಮೆಗಳಿಗೆ ಮಾತ್ರ ಕೇಸರಿ ಬಾವುಟ ಮತ್ತು ಹೂವುಗಳಿಂದ ಅಲಂಕರಿಸಲಾಗಿತ್ತು. ಲಕ್ಷ ಲಕ್ಷ ಸಂಖ್ಯೆಯಲ್ಲಿ ಸೇರಬೇಕಿದ್ದ ಭಕ್ತರು ಕಡಿಮೆ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ರಾತ್ರಿ ಸುಮಾರು 8 ಗಂಟೆಯ ನಂತರ ಚಂದ್ರವಳ್ಳಿ ಕೆರೆಯಲ್ಲಿ ಗಣೇಶನ ವಿಸರ್ಜನೆ ಮಾಡಲಾಯಿತು. ಶೋಭಾಯಾತ್ರೆಗೆ ಸೇರಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ನಗರದ ಎಲ್ಲಡೆ ಬ್ಯಾರಿಕೇಡ್ ನಿರ್ಮಿಸಿ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಒಟ್ಟಾರೆಯಾಗಿ ಕೋಟೆ ನಾಡು ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನಡೆಯಬೇಕಿದ್ದ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಶೋಭಾಯಾತ್ರೆ ಜರುಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಶಾಸಕರುಗಳು, ಜನಪ್ರತಿನಿಧಿಗಳು, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಸೇರಿದಂತೆ ಭಕ್ತಾದಿಗಳು ಭಾಗವಹಿಸಿದ್ದರು.

Leave a Reply

Your email address will not be published.

Send this to a friend