ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಚಂದ್ರಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಇಂದು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಇದೇ ವೇಳೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಎರಡು ನಿಮಿಷಗಳ ಕಾಲ ಮೌನಚರಣೆ ಮಾಡುವ ಮೂಲಕ ಮಾಜಿ ರಾಷ್ಟ್ರಪತಿಗೆ ಮೌನ ಆಚರಣೆ ಸಲ್ಲಿಸಿದರು. ಎಂ ಚಂದ್ರಪ್ಪ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಪ್ತರಾಗಿದ್ದಾರೆ. ಇವರು ಸಹ ಸಚಿವ ಸ್ಥಾನದ ಆಕಾಂಕ್ಷಿ ಯಾಗಿದ್ದಾರೆ. ಆದರೆ ನಿಗಮ ಸ್ಥಾನದ ಅಧ್ಯಕ್ಷಗಿರಿ ದೊರೆತ ಹಿನ್ನೆಲೆಯಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದರು. ಪಕ್ಷ ಹೇಳಿದಂತೆ ನಾನು ಕೆಲಸ ಮಾಡಲು ಸಿದ್ಧ ಎಂದು ಈ ಹಿಂದೆ ಹೇಳಿದ್ದರು.