ಚಿತ್ರದುರ್ಗ : ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡುವಲ್ಲಿ ವಿಫಲವಾಗಿದ್ದಾರೆ ಎಂದು ಸರ್ಕಾರದ ವಿರುದ್ಧ ಚಿತ್ರದುರ್ಗದ ಹಿರಿಯ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಆರು ಬಾರಿ ಶಾಸಕನಾಗಿದ್ದೇನೆ ನನ್ನಂತೆ ಹಲವಾರು ಹಿರಿಯ ಶಾಸಕರಿದ್ದಾರೆ ಅವರನ್ನು ಕಡೆಗಣಿಸಲಾಗಿದೆ ಎಂದು ಸಚಿವ ಸ್ಥಾನಕ್ಕಾಗಿ ತಿಪ್ಪಾರೆಡ್ಡಿ ಆಗ್ರಹಿಸಿದರು. ಪ್ರತಿಬಾರಿಯೂ ಹೊರಗಿನ ಜಿಲ್ಲೆಯವರೇ ಉಸ್ತುವಾರಿ ಸಚಿವರಾಗುತಿದ್ದಾರೆ. ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದರು. ಬೇರೆ ಜಿಲ್ಲೆಯವರು ಉಸ್ತುವಾರಿ ವಹಿಸಿಕೊಂಡರೆ ಅಭಿವೃದ್ಧಿ ಕೆಲಸ ಆಗುವುದಿಲ್ಲ, ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ ಎಂದು ಪರೋಕ್ಷವಾಗಿ ಸಚಿವ ಶ್ರೀರಾಮುಲು ಟಾಂಗ್ ನೀಡಿದರು.