ಅಪಘಾತದಲ್ಲಿ ಗಾಯೊಗೊಂಡಿದ್ದ ಚಿತ್ರದುರ್ಗ ಎಸಿ ಪ್ರಸನ್ನ ಇನ್ನಿಲ್ಲ.

ಚಿತ್ರದುರ್ಗ : ಅಪಘಾತದಲ್ಲಿ ಗಾಯೊಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಿತ್ರದುರ್ಗ ಉಪವಿಭಾಗಾಧಿಕಾರಿ ಪ್ರಸನ್ನ (51) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ನಿನ್ನೆ ಬೆಳಿಗ್ಗೆ ಚಿತ್ರದುರ್ಗ ನಗರದ ಗೋನೂರು ರಸ್ತೆಯಲ್ಲಿ ವಾಕಿಂಗ್ ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಾಯಗೊಂಡಿದ್ದರು.
ಬೈಕ್ ಡಿಕ್ಕಿಯಿಂದ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿತ್ತು. ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪ್ರಸನ್ನ ಅವರು ಕಳೆದ ಒಂದು ವರ್ಷದಿಂದ ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಹುಟ್ಟುರಾದ ಚಿತ್ರದುರ್ಗ ತಾಲೂಕಿನ ಕಡಬನಕಟ್ಟೆ ಗ್ರಾಮದವರಾಗಿದ್ದರು. ತಂದೆ ತಾಯಿ, ಪತ್ನಿ,ಇಬ್ಬರು ಪುತ್ರಿಯರು, ಸೋದರ ಸೋದರಿಯರು ಸೇರಿದಂತೆ ಅನೇಕರನ್ನು ಆಗಲಿದ್ದಾರೆ.
ಮೃತರ ಸಾವಿಗೆ ಚಿತ್ರದುರ್ಗ ಜಿಲ್ಲೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಮಠಾಧೀಶರು, ಸಾರ್ವಜನಿಕರು, ಕಂಬನಿ ಮಿಡಿದಿದ್ದಾರೆ.

Leave a Reply

Your email address will not be published.

Send this to a friend