ಚಿತ್ರದುರ್ಗ : ವಿಧಾನಸಭಾ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ಸಂಗಮೇಶ್ ಬಟ್ಟೆ ಬಿಚ್ಚಿಸಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಭದ್ರಾವತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡಿಯುತಿದ್ದು ಈ ವಿಚಾರವಾಗಿ ಕಾಂಗ್ರೆಸ್ ನವರು ಭದ್ರಾವತಿಯನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ?. ಎಂದು ಸಚಿವ ಶ್ರೀರಾಮುಲು ಪಶ್ನೆಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮದಲ್ಲಿ ಶ್ರೀ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಲ ಚಕ್ರ ಹೀಗೆ ಇರುವುದಿಲ್ಲ ಎಂದು ಕಾಂಗ್ರೆಸ್ ಸರ್ಕಾರ ಇದ್ದಾಗ ನಾನು ಹೇಳಿದ್ದೆ ಎಂದರು. ಬಿಜೆಪಿ, ಹಿಂದುಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸಿ ಅವರ ವಿರುದ್ಧ ಎಫ್ಐಆರ್ ಹಾಕಿ ರೌಡಿ ಶೀಟರ್ ಓಪನ್ ಮಾಡಿದ್ರಿ ?. ಆಗ ಎಲ್ಲಿ ಹೋಗಿತ್ತು ನಿಮ್ಮ ಈ ಬುದ್ಧಿ ಎಂದು ಮತ್ತೊಮ್ಮೆ ಪ್ರಶ್ನೆ ಮಾಡಿದರು. ಶಾಸಕ ಸಂಗಮೇಶ್ ಮಗನ ವಿರುದ್ಧ ಕೇಸ್ ದಾಖಲಿಸಿಲ್ಲ ಎಂದರು.
ಭದ್ರಾವತಿಯಲ್ಲಿ ಪ್ರತಿಭಟನೆ ಮಾಡಲು ನಿಮಗೆ ಯಾವ ನೈತಿಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಸಚಿವ ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ವಿಚಾರವಾಗಿ ಮಾತಾನಾಡಿದ ಅವರು ಜನಾರ್ದನ ರೆಡ್ಡಿಯವರು ಎಲ್ಲೂ ಓಡಾಟ ಮಾಡಬಾರದೆ ?. ಈಗ ಚುನಾವಣೆ ಬಂದಿಲ್ಲ ಎಂದರು. ನಾನು ಮೊಳಕಾಲ್ಮೂರಿಗೆ ಬಂದು ಸ್ಪರ್ಧಿಸಿರುವುದು ಪಕ್ಷದ ನಿರ್ಧಾರ ಎಂದರು. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು ಹೇಳಿದರು