ಜಿಲ್ಲೆಯಲ್ಲಿ ಹೆಚ್ಚಿದ ಕೋವಿಡ್ -19 ಪ್ರಕರಣಗಳು

ಚಿತ್ರದುರ್ಗ : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 286 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,896 ಕ್ಕೆ ಏರಿಕೆಯಾದಂತಾಗಿದೆ.
 ಚಿತ್ರದುರ್ಗ ತಾಲ್ಲೂಕಿನಲ್ಲಿ 50,  ಹಿರಿಯೂರು-65, ಚಳ್ಳಕೆರೆ-60, ಮೊಳಕಾಲ್ಮುರು 24, ಹೊಸದುರ್ಗ 57 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 30 ಸೇರಿದಂತೆ ಒಟ್ಟು 286 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇಂದು 14 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 467 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 286 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 2,896 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1,726 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,135 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 626 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 21,183 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.  

Leave a Reply

Your email address will not be published.

Send this to a friend