ಚಿತ್ರದುರ್ಗ : ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿಎಂ ಬಿ.ಎಸ್. ಯಡಿಯೂರಪ್ಪ ನವರು ಹೇಳಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ವೈ ಇವತ್ತು ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಮಾತನಾಡುತ್ತೆನೆ ಎಂದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಗೊಂದದವಿಲ್ಲದೆ, ಬೇಗ ಕ್ಲೀಯರ್ ಮಾಡಲು ಹೇಳುತ್ತೇನೆ ಎಂದು ತಿಳಿಸಿದರು.
ಇನ್ನು ಚಿತ್ರದುರ್ಗದ ಸ್ಥಳೀಯ ಶಾಸಕರಾದ ಶಾಸಕಿ. ಕೆ ಪೂರ್ಣಿಮಾ ಶ್ರೀನಿವಾಸ್, ಜಿ.ಎಚ್. ತಿಪ್ಪಾರೆಡ್ಡಿ ಮಂತ್ರಿಸ್ಥಾನ ನೀಡುವ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ದೆಹಲಿ ಹೈಕಮಾಂಡ್ ಏನು ತಿರ್ಮಾನ ಕೈಗೊಳ್ಳುತ್ತಾರೆ ನೋಡೋಣ ಎಂದು ಜಾರಿಕೊಂಡರು.
ಮುರುಘಾ ಮಾಠದಲ್ಲಿ ಮ್ಯೂಸಿಯಂ ಉದ್ಘಾಟನೆ : ಚಿತ್ರದುರ್ಗ ನಗರದ ವರವಲಯದಲ್ಲಿರುವ ಮುರುಘಾ ಮಠದ ಆವರಣದಲ್ಲಿರುವ ಮುರುಘಾ ಮ್ಯೂಸಿಯಂ ಘಟಕವನ್ನು ಸಿಎಂ ಬಿಎಸ್ವೈ ಉದ್ಘಾಟಿಸಿದರು.
ಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ಮಾದಾರ ಚನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ ಕೆ ಪೂರ್ಣಿಮಾ ಶ್ರೀನಿವಾಸ್, ತಿಪ್ಪಾರೆಡ್ಡಿ, ಎಂ. ಚಂದ್ರಪ್ಪ, ಗೂಳಿಹಟ್ಟಿ ಶೇಖರ್,ಟಿ. ರಘುಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.