ಚಿತ್ರದುರ್ಗದಲ್ಲಿ 17 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ..

ಚಿತ್ರದುರ್ಗ : ಪದವಿ ಕಾಲೇಜುಗಳು ಆರಂಭಗೊಂಡ ಬೆನ್ನಲ್ಲೇ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿನ ಒಟ್ಟು 17 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದ ಇನ್ನಿತರ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಆತಂಕವನ್ನುಂಟುಮಾಡಿದೆ.

ಎಂಟು ತಿಂಗಳ ಬಳಿಕ ಪದವಿ ಕಾಲೇಜು ಪ್ರಾರಂಭಗೊಂಡಿದ್ದು, ನಾಲ್ಕು ದಿನದಲ್ಲಿ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ 1,647 ಜನರ ಆರ್​​​ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಇದರಲ್ಲಿ 17 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ. ಆರ್ ಟಿಪಿಸಿಆರ್ ಟೆಸ್ಟ್ ವರದಿ ಇದ್ದರೆ ಮಾತ್ರ ಕಾಲೇಜಿಗೆ ಪ್ರವೇಶ ನೀಡಲಾಗುವುದು ಎಂಬ ಕಾರಣಕ್ಕೆ ಎಲ್ಲ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಒಳಗಾಗಿದ್ದು, ಈ ಪೈಕಿ 17 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಇರುವುದು ದೃಢಪಟ್ಟಿದೆ.

ಈ ಎಲ್ಲ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇರುವುದಾಗಿ ವರಿದಿ ಬಂದಿದೆ. ಆದರೆ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿದೆ ಎನ್ನಲಾಗಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಜಿಲ್ಲೆಯಲ್ಲಿರುವ ಕೋವಿಡ್ ಸೆಂಟರ್ ಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Leave a Reply

Your email address will not be published.

Send this to a friend