ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ!

ರಾಮನಗರ :- ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಚನ್ನಪಟ್ಟಣ ತಾಲೂಕಿನ ಹೊನ್ನಾಯಕನಹಳ್ಳಿಯ ಕೋವಿಡ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ೩೭ ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ನಾಲ್ಕು ದಿನದ ಕೆಳಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ತಾಲೂಕು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮನನೊಂದು ವ್ಯಕ್ತಿ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಆರೋಗ್ಯಾಧಿಕಾರಿಗಳು ಹಾಗು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *

Send this to a friend