ಹಿರಿಯೂರು : ಮಳೆ ಬಂದು ಹಾನಿಗೀಡಾದ ರೈತರ ಈರುಳ್ಳಿ ಪ್ರದೇಶಗಳಿಗೆ ಬಿಜೆಪಿ ಮುಖಂಡ ಡಿ.ಟಿ. ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ತಾಲೂಕಿನ ಪುಟ್ಟನ ಕಟ್ಟೆ, ಕೆ.ಆರ್. ಹಳ್ಳಿ, ಯಳಗೊಂಡನಹಳ್ಳಿ ಸೇರಿದಂತೆ ಮತ್ತಿತರರ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೀಡಾದ ಈರುಳ್ಳಿ ಬೆಳೆಯನ್ನು ವಿಕ್ಷಿಸಿದವರು. ತಾಲೂಕಿನಲ್ಲಿ ಸುಮಾರು ಎರಡೂವರೆ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆ ನಾಶವಾಗಿದ್ದು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಮೂಲಕ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು. ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ, ಮಸ್ಕಲ್ ಪಂಚಾಯಿತಿ ಕಂದಾಯ ಅಧಿಕಾರಿ ಗುರುರಾಜ್, ತಮ್ಮಣ್ಣ, ಸತೀಶ್, ಜಗದೀಶ್, ಶಿವಣ್ಣ, ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.