ಹೊಸದಿಲ್ಲಿ: ದೇಶದ ಎಲ್ಲಾ ಜನರಿಗೆ ಕೋವಿಡ್-19 ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಹೇಳಿದ್ದಾರೆ.
ಕಳೆದ ವಾರ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬಿಹಾರದ ಜನತೆಗೆ ಉಚಿತ ಕೋವಿಡ್ ಲಸಿಕೆ ನೀಡುವುದಾಗಿ ಹೇಳಿದ್ದರು. ಇದು ವಿರೋಧ ಪಕ್ಷಗಳ ಕಣ್ಣು ಕೆಂಪಾಗಿಸಿತ್ತು. ಎನ್ ಡಿಎ ಸರ್ಕಾರ ಕೋವಿಡ್ ಲಸಿಕೆ ವಿಚಾರವನ್ನು ರಾಜಕೀಯ ಲಾಭಕ್ಕೆ ಬಳಸುತ್ತಿದೆ ಎಂದು ಟೀಕಿಸಿದ್ದವು. ಇದರ ಬೆನ್ನಲ್ಲೇ ತಮಿಳುನಾಡು ಸೇರಿ ಕೆಲವು ರಾಜ್ಯಗಳು ತಾವು ಉಚಿತ ಲಸಿಕೆ ಹಂಚುವುದಾಗಿ ಘೋಷಣೆ ಮಾಡಿದ್ದವು.
ದೇಶದ ಪ್ರತಿ ವ್ಯಕ್ತಿಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ದೇಶದಲ್ಲಿ ಪ್ರತಿಯೊಬ್ಬರಿಗೆ ಲಸಿಕೆ ನೀಡಲು ಅಂದಾಜು 500 ರೂ.ಗಳನ್ನು ಖರ್ಚು ಮಾಡಲಾಗುವುದು ಎಂದು ಪ್ರತಾಪ್ ಸಾರಂಗಿ ಹೇಳಿದ್ದಾರೆ.