ಬೆಂಗಳೂರು : ತೀವ್ರ ಕುತೂಹಲಕಾರಿ ಮೂಡಿಸಿದ್ದ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಡಿಸೆಂಬರ್ ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾಆಯೋಗ ಸೋಮವಾರ ಪ್ರಕಟಿಸಿದೆ.
113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ಡಿ. 22ರಂದು ನಡೆಯಲಿದೆ ಹಾಗೂ ಡಿ. 27ರಂದು ಉಳಿದ ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 7ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳ 45128 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕೆಲವು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ. ಇಂದಿನಿಂದಲೇ (ನ. 30) ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ, ಡಿ. 11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ. 14 ನಾಮಪತ್ರ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ. 30ರಂದು ಫಲಿತಾಂಶ ಪ್ರಕಟವಾಗಲಿದೆ.