ಚಿತ್ರದುರ್ಗ : ಪ್ರತ್ಯೇಕ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಬಳಿ ಇಬ್ಬರು ಹಾಗೂ ವಡ್ಡನಹಳ್ಳಿ ಬಳಿ ಒಬ್ಬರು ಮೃತಪಟ್ಟಿರುವುದು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ತಡರಾತ್ರಿ ಮೇಟಿಕುರ್ಕೆ ಬಳಿ ಕ್ಯಾಂಟರ್ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿಕೊಂಡು ಊಟ ಮುಗಿಸಿ, ಕ್ಯಾಂಟರ್ ಗಾಡಿ ಮುಂದೆ ಮಲಗಿಕೊಂಡಿದ್ದರು ಎಂದು ತಿಳಿದು ಬಂದಿದೆ. ಕ್ಯಾಂಟರ್ ಗಾಡಿ ವಾಹನವನ್ನು ಯಾವುದೇ ಮೂನ್ಸೂಚನೆ ನೀಡದೆ ನಿಲ್ಲಿಸಿದ್ದರಿಂದ, ದಾವಣಗೆರೆಯಿಂದ ಬೆಂಗಳೂರು ಕಡೆಗೆ ಅಂಚೆ ಕಾಗದ ಪತ್ರ ತುಂಬಿಕೊಂಡು ಸಾಗುತ್ತಿದ್ದ ಅಂಚೆ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಮಾರ್ ( 24), ವಿಜಯ್ (28) ಮೃತರು ಎಂದು ಗುರುತಿಸಲಾಗಿದೆ. ಈ ಘಟನೆಗೆ ಅಂಚೆ ವಾಹನ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.
ಮತ್ತೊಂದು ಕಡೆ ಹಿರಿಯೂರು ತಾಲ್ಲೂಕಿನ ವಡ್ಡನಹಳ್ಳಿ ಬಳಿ ಮುಂದೆ ಚಲಿಸುತ್ತಿದ್ದ ಲಾರಿಗೆ ಟಾಟಾ ಏಸ್ ಡಿಕ್ಕಿ ಹೊಡೆದಿದ್ದರಿಂದ ಮುರುಗನ್ ( 36) ಮೃತಪಟ್ಟಿದ್ದಾನೆ.
ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ರಕ್ಷಿತ, ಪವನ್, ಚಂದ್ರು, ರಾಜು, ಅಂಚೆ ವಾಹನ ಚಾಲನ ಯೇಸು, ಟಾಟಾ ಏಸ್ ಚಾಲಕ ಕುಮಾರ್ ಇವರುಗಳಿಗೆ ಗಂಭೀರವಾಗಿ ಗಾಯಗಳಾಗಿದ್ದು ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.