ಚಿತ್ರದುರ್ಗ : ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ರೈತರ ಪ್ರತಿಭಟನೆಯ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಕೋಟೆ ನಾಡು ಚಿತ್ರದುರ್ಗದ ರೈತರು ಕೆಲಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರ ಬಳಿ ಹಾದುಹೋಗುವ ಬೆಂಗಳೂರು – ಪೂನಾ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ರೈತ ಸಂಘದ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ದೆಹಲಿಯಲ್ಲಿ ಧರಣಿ ನಡೆಸುತ್ತಿರುವ ರೈತರ ಮೇಲೆ ದೌರ್ಜನ್ಯ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ದೇಶದಲ್ಲಿ ಪ್ರಧಾನಿ ಮೋದಿ ಅವರು ಅಧಿಕಾರ ನಡೆಸುತ್ತಿಲ್ಲ ಬದಲಿಗೆ ಅಂಬಾನಿ,ಅಧಾನಿಯ ಇತರೆ ಕಂಪನಿಗಳು ಸರ್ಕಾರವನ್ನು ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಜನರಿಗೆ ವಚನವನ್ನು ಕೊಟ್ಟು ಅಧಿಕಾರಕ್ಕೆ ಬಂದರು, ವಿದೇಶದಲ್ಲಿರುವ ಕಪ್ಪುಹಣವನ್ನು ವಾಪಸ್ ತರುತ್ತೇವೆ. ರೈತರ ಆದಾಯವನ್ನು ದಿಗಣ ಗೊಳಿಸುತ್ತೇವೆ ಎಂದ ಮೋದಿ ನೋಟು ಬ್ಯಾಂಕ್ ಮೂಲಕ ಜನರಿಗೆ ವಂಚನೆ ಮಾಡಿದ್ದಾರೆ. ಇದೇ ರೀತಿ ಸರ್ಕಾರ ಮುಂದುವರೆದರೇ ರೈತರು ಸರ್ವನಾಶ ವಾಗುತ್ತದೆ ಎಂದು ಕೇಂದ್ರ ಸರ್ಕಾರ ವಿರುದ್ಧ ರೈತರು ಗುಡುಗಿದರು.
ಇನ್ನು ಚಳ್ಳಕೆರೆ ನಗರದಲ್ಲೂ ಕೂಡ ರೈತರು ಚಳ್ಳಕೆರೆ-ಬೆಂಗಳೂರು ರಸ್ತೆ ಹೆದ್ದಾರಿ ಬಂದ್ ಮಾಡಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ರೈತರ ಪ್ರತಿಭಟನೆಯಿಂದ ಕೆಲಕಾಲ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದವು. ನಂತರ ಪ್ರತಿಭಟನಾ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.