ಕರ್ನಾಟಕ ಸಂಪೂರ್ಣ ಡ್ರಗ್ಸ್ ಮುಕ್ತವಾಗಲಿದೆ ಶಾಸಕಿ ಕೆ. ಪೂರ್ಣಿಮಾ ಅಭಿಮತ.

ಹಿಂರಿಯೂರು : ರಾಜ್ಯದಲ್ಲಿ ಬಹಳ ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಪಿಡುಗಾಗಿ ಪರಿಣಮಿಸಿದ ಡ್ರಗ್ಸ್ ಹಾವಳಿ ಸಿಎಂ ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಂಪೂರ್ಣವಾಗಿ “ಡ್ರಗ್ಸ್ ಮುಕ್ತ ಕರ್ನಾಟಕ” ಆಗಲಿದೆ ಎಂದು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅಭಿಮಯ ವ್ಯಕ್ತಪಡಿಸಿದರು.ಇಂದು ನಗರದ ಡಾ : ರಾಜ್ ಕುಮಾರ್ ವೃತ್ತದಲ್ಲಿ ಬಿಜೆಪಿ ಹಿರಿಯೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಹಮ್ಮಿಕೊಂಡಿದ್ದ’ಡ್ರಗ್ಸ್ ಮುಕ್ತ ಕರ್ನಾಟಕ’ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

“ರಾಜ್ಯ ಸರ್ಕಾರದ ಈ ಸಂಕಲ್ಪಕ್ಕೆ ಗೃಹಸಚಿವ ಬೊಮ್ಮಾಯಿ ರವರು ನಿರ್ಧಾಕ್ಷ್ಣವಾಗಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ತನಿಖಾಧಿಕಾರಿಗಳಿಗೆ ಸೂಚಿಸಿದ್ದಾರೆ, ಈಗಾಗಲೇ ಅನೇಕರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿರುವುದು ಡ್ರಗ್ಸ್ ವಿರುದ್ಧ ಸಮರವೇ ಸಾರಿದಂತಿದೆ ಎಂದರು.
ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರು ಪಕ್ಷದ ವತಿಯಿಂದ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು. ನಮ್ಮ ಕ್ಷೇತ್ರದಲ್ಲೂ ಕೂಡ ಡ್ರಗ್ಸ್ ವಿರುದ್ಧ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಮುಖಂಡರಾದ ಡಿ.ಟಿ. ಶ್ರೀನಿವಾಸ್ ಮಾತನಾಡಿ ಇದುವವರೆಗೂ ಯುವ ಜನಾಂಗದಲ್ಲಿ ತಲೆದೋರಿದ್ದ ಡ್ರಗ್ಸ್ ದಂಧೆಯು ಸಿನಿಮಾ ಕ್ಷೇತ್ರವೂ ಸೇರಿ, ವಿವಿಧ ಕ್ಷೇತ್ರಗಳಲ್ಲಿ ಕಾಣುತ್ತಿರುವುದು ಶೋಚನೀಯ ವಿಷಯವಾಗಿದೆ ಎಂದರು. ಆರ್ಥಿಕತೆ ಹಾಗೂ ಆರೋಗ್ಯದ ಮೇಲೆ ಭೀಕರ ಪರಿಣಾಮ ಬೀರಲಿರುವ ಡ್ರಗ್ಸ್ ಸೇವನೆ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡು ಬಂದಲ್ಲಿ ಪೋಲೀಸ್ ಇಲಾಖೆಯ ಗಮನಕ್ಕೆ ತರಲು ಎಲ್ಲರೂ ಇಚ್ಚಾಸಕ್ತಿ ಪ್ರದರ್ಶಿಸಬೇಕಿದೆ ಎಂದರು.

ಡ್ರಗ್ಸ್ ಧಂದೆಯಿಂದ ಈ ಹಿಂದೆ ಅನೇಕ ರಾಜ್ಯಗಳಲ್ಲಿ ಪಕ್ಷಗಳು ಅಧಿಕಾರ ಕಳೆದುಕೊಂಡ ಉದಾಹರಣೆ ಇವೆ ಆದರೇ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಡ್ರಗ್ಸ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು ‘ಡ್ರಗ್ಸ್ ಮುಕ್ತ ಕರ್ನಾಟಕ’ ಆಗಲು ಬಿಎಸ್ವೈ ಹಾಗೂ ಗೃಹ ಸಚಿವ ಬೊಮ್ಮಾಯಿ ರವರು ಸಫಲರಾಗಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ರಾಜೇಶ್ವರಿ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್, ಎಂ ಎಸ್ ರಾಘವೇಂದ್ರ, ಡಿಸಿಸಿ ಬ್ಯಾಂಕ್ ನಿರ್ದೇಶಕ ದ್ಯಾಮೇಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಆರಾಧ್ಯ, ಮಂಜುನಾಥ್, ಬಿಜೆಪಿ ಮುಖಂಡ ಕೇಶವಮೂರ್ತಿ, ಗಂಗಾಧರ್, ತಾಪಂ ಸದಸ್ಯ ಜಯರಾಮಯ್ಯ, ಯಶವಂತ ರಾಜ್, ನಗರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ್, ಮಂಜುಳಾ, ಸದಸ್ಯರಾದ ಬಾಲಕೃಷ್ಣ, ಮಹೇಶ್, ಪಾಲವ್, ಚಿರಂಜೀವಿ, ಮುಖಂಡರಾದ ಎಚ್ ಆರ್ ತಿಮ್ಮಯ್ಯ, ವೆಂಕಟೇಶ್ ಎಂ ವಿ ಹರ್ಷ, ಶೋಭಾ, ವಾಣಿಶ್ರೀ, ಲಲಿತಮ್ಮ, ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published.

Send this to a friend