ಹಿರಿಯೂರು ಬಂದ್ ಯಶಸ್ವಿಗೊಳಿಸಿ : ರೈತ ಸಂಘದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಕರೆ.

ಹಿರಿಯೂರು : ದೇಶದ ಜನತೆ ಕೊರೊನಾ ಸಂಕಷ್ಠದಲ್ಲಿ ನರಳುತ್ತಿರುವ ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ಸಂಕುಲವನ್ನೇ ನಾಶ ಮಾಡುವ ಮೂರು ಸುಗ್ರೀವಾಜ್ಞೆ ಗಳನ್ನು ಜಾರಿಗೆ ತಂದು ವಿಶೇಷ ವಿಧಾನಸಭಾ ಅಧಿವೇಶನದಲ್ಲಿ ಅಂಗೀಕಾರ ಮಂಡಿಸಲಾಗುತ್ತಿದ್ದು, ಇದನ್ನು ವಿರೋಧಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಹಿರಿಯೂರು ಬಂದ್ ಗೆ ತಾಲ್ಲೂಕಿನ ಎಲ್ಲಾ ಜನಪ್ರತಿನಿಧಿಗಳು, ಮಹಿಳಾ ಸಂಘಟನೆಗಳು, ಸಮಸ್ತ ನಾಗರೀಕರು ಬೆಂಬಲಿಸಬೇಕು ಎಂಬುದಾಗಿ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಮನವಿ ಮಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ವಿರೋಧ ಪಕ್ಷವಾದ ಕಾಂಗ್ರೆಸ್ ಸೇರಿದಂತೆ ದಲಿತಸಂಘರ್ಷ ಸಮಿತಿ, ಕರ್ನಾಟಕ ರಕ್ಷಣಾವೇದಿಕೆ, ಮಾದಿಗದಂಡೋರ ಸೇರಿದಂತೆ ವಿವಿಧ ಪ್ರಗತಿಪರ ಹಾಗೂ ದಲಿತ ಸಂಘಟನೆಗಳ ಸಂಯುಕ್ತಾಶ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರೈತ ಮುಖಂಡರಾದ ಕಸವನಹಳ್ಳಿ ರಮೇಶ್ ಮಾತನಾಡಿ, ತಾಲ್ಲೂಕಿನ ಸಮಸ್ತ ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಸೋಮವಾರದ ಬಂದ್ ಕಾರ್ಯಕ್ರಮ ಹಾಗೂ ಪ್ರತಿಭಟನೆಯಲ್ಲಿ ತಾಲ್ಲೂಕಿನ ರೈತಬಾಂದವರು, ದಲಿತ ಹಾಗೂ ಕಾರ್ಮಿಕ ಮುಖಂಡರುಗಳು ಮತ್ತು ಪ್ರಗತಿಪರ, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸಪ್ಟಂಬರ್ 28ರಂದು ಸೋಮವಾರ ನಗರದ ಸರ್ಕಾರಿ ಆಸ್ಪತ್ರೆಯ ಬಳಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಬೆಳಿಗ್ಗೆ 8-00 ಗಂಟೆಗೆ ಸೇರುವ ಮೂಲಕ ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ಅವರು ಮನವಿ ಮಾಡಿದರು.

ರೈತ ಮುಖಂಡ ಕಸವನಹಳ್ಳಿ ರಮೇಶ್, ಕರವೇ ಅಧ್ಯಕ್ಷ ಉದಯ್ ಕುಮಾರ್, ದಲಿತ ಸಂಘರ್ಷ ಸಮಿತಿ ತಿಮ್ಮರಾಜು, ಅಂಬೇಡ್ಕರ್ ಸೇನೆ ಅಧ್ಯಕ್ಷ ರಾಮಚಂದ್ರ, ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ದಾದಾಪೀರ್, ಕಾರ್ಮಿಕ ಸಂಘನೆ ತಾಲೂಕು ಅಧ್ಯಕ್ಷೆ ಶ್ರೀಮತಿ ನಿಂಗಮ್ಮ, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published.

Send this to a friend