ಹಿರಿಯೂರು (ಆ.೨೨): ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಚಿಕಿತ್ಸೆಗೆ ಕಾಂಗ್ರೆಸ್ ಮುಖಂಡ ಬಿ. ಸೋಮಶೇಖರ್ ಅವರು ಸಹಾಯದ ಹಸ್ತ ಚಾಚಿದ್ದಾರೆ.
ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಪಕ್ಷ ಸಂಘಟನೆಗೆ ಭೇಟಿ ನೀಡಿದ ಅವರು ಬೇತೂರು ಪಾಳ್ಯ ಗ್ರಾಮದ ಯುವತಿಯ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಚಿಕಿತ್ಸೆಗೆ ಹಣ ನೀಡಿ, ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವುದಾಗಿ ಭರವಸೆ ನೀಡಿ, ಧೈರ್ಯ ತುಂಬುವ ಕೆಲಸ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲಿನ ಬಳಿಕ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆ ಹಿನ್ನೆಯಲ್ಲಿ ಓಡಾಡುತ್ತಿದ್ದೇನೆ ಎಂದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಕಾಂಗ್ರೆಸ್ ಪಕ್ಷದ ಗೆಲುವಿಗೆ ಪಣ ತೊಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಈಗಾಗಲೇ ಬಿಜೆಪಿ ಆಡಳಿತಕ್ಕೆ ಬೇಸತ್ತು ಬರುವ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಲಿದ್ದಾರೆ ಎಂದು ಹೇಳಿದರು.0ಬಿಜೆಪಿ ಆಂತರಿಕ ಸಮೀಕ್ಷೆಯಂತೆ ಕಾಂಗ್ರೆಸ್ ಪಕ್ಷ 140 ಸ್ಥಾನದೊಂದಿಗೆ ಸ್ಪಷ್ಟ ಬಹುಮತ ಪಡೆಯಲಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಅನೇಕ ಶಾಸಕರು, ಕಾಂಗ್ರೆಸ್ ಸೇರಲು ಮುಂದಾಗಿದ್ದು, ರಾಜ್ಯದ ವರಿಷ್ಠರೊಂದಿಗೆ ಸಂಪರ್ಕದಲ್ಲಿದ್ದಾರೆ. ಬೇರೆ ಪಕ್ಷದವರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳುವುದು ವರಷ್ಠರಿಗೆ ಬಿಟ್ಟ ವಿಚಾರ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ರಾಮಾಂಜನೇಯ, ಮದ್ದನಕುಂಟೆ ತಿಮ್ಮಣ್ಣ, ಸತೀಶ್, ಮುಖಂಡರಾದ ಈರಣ್ಣ, ಅಂಜಿನಪ್ಪ, ಹನುಮಂತಪ್ಪ, ವೆಂಕಟೇಶ, ಮರುಳಸಿದ್ಧಪ್ಪ, ಓಬಳೇಶ್, ತಿಮ್ಮಾಭೋವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.