ಹಿರಿಯೂರು: ಮನೆಯ ಬೀಗ ಮುರಿದು ಚಿನ್ನಾಭರಣ ಕದ್ದೊಯ್ದ ಕಳ್ಳರು
ಹಿರಿಯೂರು : ನಗರದ ಲಕ್ಷ್ಮಮ್ಮ ಬಡಾವಣೆಯ ಇಂದ್ರಜಿತ್ ಎಂಬುವರ ಮನೆಯ ಬೀಗ ಮುರಿದು ಚಿನ್ನಾಭರಣ ಕದ್ದೊಯ್ದ ಘಟನೆ ಬುಧವಾರ ರಾತ್ರಿ ನಡೆದಿದೆ.
ಇಂದ್ರಜಿತ್ ಅವರು ಮನೆಯಲ್ಲಿ ಇರದೇ ಇರುವುದನ್ನು ಗಮನಿಸಿ ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಬೀಗ ಮುರಿದು ಒಳನುಗ್ಗಿದ ದುಷ್ಕರ್ಮಿಗಳು ಅಲ್ಮೆರಾದಲ್ಲಿದ್ದ ವಸ್ತುಗಳನ್ನು ದೋಚಿದ್ದಾರೆ. ಇಂದ್ರಜಿತ್ ಅವರು ಮನೆಗೆ ಮರಳಿದ ಬಳಿಕ ಕಳವಾಗಿರುವ ಚಿನ್ನಾಭರಣದ ನಿಖರ ಮಾಹಿತಿ ಸಿಗಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ರೋಷನ್ ಜಮೀರ್, ನಗರಠಾಣೆ ಇನ್ ಸ್ಪೆಕ್ಟರ್ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಹಿರಿಯೂರು ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.