ಹಿರಿಯೂರು ( ಅ.17): 2023ರ ವಿಧಾನಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಕ್ಕೆ ಜನತೆ ಬೆಂಬಲಿಸಲಿದ್ದು, ಈ ಬಾರಿ ಮಾಜಿ ಪ್ರಧಾನಿ ದೇವೇಗೌಡ ಅಪ್ಪಾಜಿ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಣ್ಣನ ನೇತೃತ್ವದ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಎಸ್ ಮುಖಂಡ ರವೀಂದ್ರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹುಲಗಲಕುಂಟೆ ಗ್ರಾಮದ ಕಾರ್ಯಕರ್ತರಾದ ರಾಜು, ಕುಮಾರಸ್ವಾಮಿ ಹಾಗೂ ಯೋಗೀಶ್ ಮನೆಗೆ ಭೇಟಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.
ರಾಜ್ಯಾದ್ಯಂತ ಜೆಡಿಎಸ್ ಪಕ್ಷಕ್ಕೆ ಉತ್ತಮ ಸ್ಪಂದನೆ ಸಿಗುತ್ತಿದೆ. ಹಿರಿಯೂರು ತಾಲ್ಲೂಕಿನಲ್ಲಿ ಜೆಡಿಎಸ್ ಗೆ ಉತ್ತಮ ಜನಬೆಂಬಲ ದೊರಕುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯೋಗೇಶ್, ರಾಜು, ಕುಮಾರಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.