ದೇವಸ್ಥಾನಕ್ಕೆ ಹೋಗುತಿದ್ದ ಇಬ್ಬರ ದುರ್ಮರಣ, ಮೂವರಿಗೆ ಗಾಯ.
ಚಿತ್ರದುರ್ಗ : ಕಟ್ಟಿಗೆ ತುಂಬಿಕೊಂಡು ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಚಳ್ಳಕೆರೆ ರಸ್ತೆಯ ಆರ್.ಕೆ. ಪವರ್ ಜಿನ್ ಬಳಿ ನಡೆದಿದೆ. ಕುಮಾರ್ (48), ದೇವರಾಜ (38) ಇಬ್ಬರು ಮೃತಪಟ್ಟಿದ್ದಾರೆ. ಜಯರಾಮ್, ಗಿರೀಶ್, ಶ್ರೀನಿವಾಸ್ ಗಾಯಗೊಂಡಿದ್ದು ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳು ಬೆಂಗಳೂರಿನ ಸಂಜೀವ ನಗದವರಾಗಿದ್ದು, ಬೆಂಗಳೂರಿನಿಂದ ಬಳ್ಳಾರಿ ಹತ್ತಿರ ಇರುವ ಪಾಂಡುರಂಗ ಸ್ವಾಮಿ ದೇವಸ್ಥಾನಕ್ಕೆ ಹೋಗುವಾಗ ಈ ಘಟನೆ ಸಂಭವಿಸಿದೆ. ವಿಷಯ ತಿಳಿದ ತಕ್ಷಣ ಹಿರಿಯೂರು ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.