ಜೆಡಿಎಸ್ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿ  ಕ್ಷೇತ್ರದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನರಾಗಿದ್ದಾರೆ. ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು, ನಿನ್ನೆ ತಡರಾತ್ರಿ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿರುವ ತೋಟದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ನಿನ್ನೆ ಅವರ ಆರೋಗ್ಯದಲ್ಲಿ ಏರುಪೇರು ಕಂಡ ಬಂದ  ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೊರೋನಾ ಪಾಸಿಟಿವ್ ಇರುವುದು ಧೃಡಪಟ್ಟಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕರಿಯಾಗದೇ ಅವರು ಮೃತಪಟ್ಟಿದ್ದಾರೆ.  ಅವರು ಭದ್ರಾವತಿ ಕ್ಷೇತ್ರದಲ್ಲಿ ಮೂರು ಬಾರಿ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.

ಸಂತಾಪ ಸೂಚಿಸಿದ ಸಿಎಂ ಬಿಎಸ್​ ಯಡಿಯೂರಪ್ಪ : ಜೆಡಿಎಸ್ ಮಾಜಿ ಶಾಸಕ ಅಪ್ಪಾಜಿಗೌಡರ ನಿಧನಕ್ಕೆ ಸಿಎಂ ಬಿ.ಎಸ್​. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಭದ್ರಾವತಿಯ ಮಾಜಿ ಶಾಸಕ ಅಪ್ಪಾಜಿಗೌಡ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಯಿತು. ಕ್ಷೇತ್ರದ ಕಾರ್ಮಿಕರ ಹಿತರಕ್ಷಣೆಗೆ ಅವರ ಪರಿಶ್ರಮವನ್ನು ಮರೆಯಲಾಗದು. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published.

Send this to a friend