ಚಿತ್ರದುರ್ಗ : ಶಿರಾ ಉಪಚುನಾವಣೆಯಲ್ಲಿ ಘೋಷಿಸಿದ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ಘೋಷಿಸಿದ್ದು ಇದು ಕಾಡುಗೊಲ್ಲರ ಮತಗಳನ್ನು ಸೆಳೆಯುವುದಕಷ್ಟೇ ಸೀಮಿತವಾಗಿದೆ ಎಂದು ಜಿಲ್ಲಾ ಪಂಚಾಯತಿ ಸದಸ್ಯ ಸಿ.ಬಿ. ಪಾಪಣ್ಣ ಆರೋಪಿಸಿದರು. ಇಂದು ಹಿರಿಯೂರಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ನಾವು ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಡಿ ಎಂದು ಸರ್ಕಾರವನ್ನು ಕೇಳಿರಲಿಲ್ಲ ಆದರೆ ಸರ್ಕಾರ ಉಪಚುನಾವಣೆಯಲ್ಲಿ ಗೆಲುವು ಪಡೆಯಲು ಕಾಡುಗೊಲ್ಲರ ಮತಗಳನ್ನು ಸೆಳೆಯುವುದಕ್ಕೆ ಕಾಡುಗೊಲ್ಲರ ಅಭಿವೃದ್ಧಿ ನಿಗಮ ಘೋಷಣೆ ಮಾಡಿ ಅದಕ್ಕೆ ಅನುದಾನ ರೂಪಿಸದೆ, ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡದೆ ಕಾಡುಗೊಲ್ಲ ಸಮಾಜಕ್ಕೆ ಅವಮಾನ ಮಾಡಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮಸ್ಕಿ ಹಾಗೂ ಬಸವಕಲ್ಯಾಣ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯದಿದ್ದರೂ ಮರಾಠಿ ಅಭಿವೃದ್ಧಿ ನಿಗಮ ಮಾಡಿ 50 ಕೋಟಿ ಅನುದಾನ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಅನುದಾನ ನೀಡಿ, ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಇದನ್ನು ನಾವು ಸ್ವಾಗತಿಸುತ್ತೆವೆ ಆದರೆ ಕಾಡುಗೊಲ್ಲ ಅಭಿವೃದ್ಧಿ ನಿಗಮ ಘೋಷಣೆ ಮಾಡಿ ಎರಡು ತಿಂಗಳಾದರೂ ಕಾರ್ಯರೂಪಕ್ಕೆ ಬರೆದೆ ನೆನೆಗುದಿಗೆ ಬಿದ್ದಿದೆ ಇದು ಸರಿನಾ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ ?. ನೀವು ಹೇಳಿದಂತೆ ಕಾಡುಗೊಲ್ಲರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ಮೊದಲ ಬಾರಿಗೆ ಶಿರಾ ಕ್ಷೇತ್ರದಲ್ಲಿ ಕಾಡುಗೊಲ್ಲರು 70% ಮತ ನೀಡುವ ಮೂಲಕ ಬಿಜೆಪಿಯ ಗೆಲುವಿಗೆ ಕಾರಣಕರ್ತರಾಗಿದ್ದಾರೆ. ಆದರೂ ಸರ್ಕಾರ ತಳ ಸಮುದಾಯದ ಬಗ್ಗೆ ಕಾಳಾಜಿ ಇಲ್ಲ, ಮತ ಪಡೆಯಲು ನಿಗಮ ಮಂಡಳಿ ಘೋಷಿಸಿ ಮೂಗಿಗೆ ತುಪ್ಪ ಸವರುವ ಕೆಲಸ ಸಿಎಂ ಬಿಎಸ್ವೈ ಹಾಗೂ ಪುತ್ರ ವಿಜಯೇಂದ್ರ ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಕಾಡುಗೊಲ್ಲ ಸಮಾಜದ ಮುಖಂಡ ಹಾಗೂ ಜಿ.ಪ. ಸದಸ್ಯ ಸಿ.ಬಿ. ಪಾಪಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮತ್ತೊಂದು ಕಡೆ ಕಾಣದ ಕೈಗಳು ಕಾಡುಗೊಲ್ಲ ಅಭಿವೃದ್ಧಿ ನಿಗಮ ತೆಗೆದು ಗೊಲ್ಲ ಅಭಿವೃದ್ಧಿ ನಿಗಮ ಮಾಡಲು ಒಳ ಸಂಚು ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸರ್ಕಾರ ಯಾವುದೇ ಕಾರಣಕ್ಕೂ ಹೆಸರು ಬದಲಾವಣೆ ಮಾಡದೆ ಕಾಡುಗೊಲ್ಲ ಅಭಿವೃದ್ಧಿ ನಿಗಮ ಎಂದು ಮುಂದುವರಿಸಬೇಕು ಜೊತೆಗೆ ಸರ್ಕಾರ ಕೂಡಲೇ ಕಾಡುಗೊಲ್ಲರ ನಿಗಮಕ್ಕೆ ಅಧ್ಯಕ್ಷರನ್ನು ಘೋಷಿಸಿ ಸುಮಾರು 100-200 ಕೋಟಿ ಅನುದಾನ ಮೀಸಲಿಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕೆಪಿಸಿಸಿ ಹಿಂದುಳಿದ ವರ್ಗಗಳ ಸಂಘಟನಾ ಕಾರ್ಯದರ್ಶಿ ಗುಯಿಲಾಳು ನಾಗರಾಜಯ್ಯ ಮಾತನಾಡಿ ಶಿರಾ ಉಪಚುನಾವಣೆ ನೆಪ ಹೇಳಿ, ಸುಳ್ಳು ಆಶ್ವಾಸನೆ ಕೊಟ್ಟು ನಮ್ಮ ಸಮುದಾಯದಿಂದ ಮತಗಳನ್ನು ಪಡೆದ ಸಿಎಂ ನುಡಿದಂತೆ ನಡೆಯದೆ ಮಾತಿಗೆ ತಪ್ಪಿದ ಮುಖ್ಯಮಂತ್ರಿ ಆಗಿದ್ದಾರೆ ಎಂದರು. 25-35 ಜನರನ್ನು ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ್ದಿರಾ, ಆದರೆ ಕಾಡುಗೊಲ್ಲ ಸಮಾಜದವರು ಬಿಜೆಪಿಗೆ ಏನು ಅನ್ಯಾಯ ಮಾಡಿದೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ ?.
ಗೊಲ್ಲರಹಟ್ಟಿಗಳು ತೀರಾ ಹಿಂದುಳಿದಿವೆ. ಬೂತ್ ಮಟ್ಟದ ಸಮೀಕ್ಷೆಯಲ್ಲಿ ತಮ್ಮ ಪಕ್ಷದ ಮುಖಂಡರೇ ಗೊಲ್ಲರಹಟ್ಟಿಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಗಮನಿಸಿದ್ದಿರೇ, ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡಿಲ್ಲ ಎಂದರು. ಸಮುದಾಯ ಮುಂದೆ ಬರಲು ಶೀಘ್ರವೇ ನಿಗಮ ಮಂಡಳಿಗೆ ಅಧ್ಯಕ್ಷರನ್ನ ಘೋಷಿಸಿ, ಅನುದಾನ ನೀಡಿ ಇಲ್ಲವಾದರೆ ಸರ್ಕಾರದ ವಿರುದ್ಧ ಉಗ್ರವಾದ ಹೋರಾಟ ಮಾಡಲಾಗುತ್ತದೆ ಹಾಗೂ 38 ತಾಲೂಕುಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವ ಕಾಡುಗೊಲ್ಲರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದರು.ಈ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಎಸ್.ಆರ್. ತಿಪ್ಪೇಸ್ವಾಮಿ, ಕಾಡುಗೊಲ್ಲ ತಾಲೂಕು ಅಧ್ಯಕ್ಷ ರಂಗಯ್ಯ, ಯುವ ಮುಖಂಡ ಪ್ರಭು ಯಾದವ್, ವಕೀಲ ಪಿ.ಆರ್. ದಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.