ಚಿತ್ರದುರ್ಗ : ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಕನ್ನಡಪರ ಸಂಘಟನೆಗಳು ಡಿ.5 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರದುರ್ಗ ನಗರದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರಿಂದ ಅರೆಬೆತ್ತಲೆ ಮೂಲಕ ಮರಾಠ ಅಭಿವೃದ್ಧಿ ನಿಗಮ ಮಂಡಳಿ ಹಿಂಪಡೆಯುವಂತೆ ಪ್ರತಿಭಟನೆ ನಡೆಸಿದರು. ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ ಬಾಯಿ ಬಡ್ಕೊಂಡು , ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೆಡೆಸುತಿದ್ದ 30 ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನ ಪೋಲಿಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಬೆಳಿಗ್ಗೆ ಚಿತ್ರದುರ್ಗ ನಗರದಲ್ಲಿ ಕರವೇ ಕಾರ್ಯಕರ್ತರಿಂದ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಟೈರ್ ಗೆ ಬೆಂಕಿ ಹೆಚ್ಚಿದ್ದರಿಂದ ಪ್ರತಿಭಟನಾಕಾರರ ನಡುವೆ ಪೋಲಿಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಜಿಲ್ಲೆಯ ಉಳಿದಂತೆ ಹಿರಿಯೂರು, ಚಳ್ಳಕೆರೆ, ಹೊಳಲ್ಕೆರೆ, ಮೊಳಕಾಲ್ಮೂರು, ಹೊಸದುರ್ಗ ತಾಲ್ಲೂಕಿನಲ್ಲಿ ಸಹ ಬಂದ್ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಎಂದಿನಂತೆ ಜನಸಾಮಾನ್ಯರ ಓಡಾಟ, ಅಂಗಡಿ ಮುಂಗಟ್ಟುಗಳು ಓಪನ್ ಆಗಿದ್ದವು. ಹಣ್ಣು, ಹಾಲು ತರಕಾರಿ ಮಾರುಕಟ್ಟೆ ಎಂದಿನಂತೆ ಇತ್ತು. ದಿನನಿತ್ಯದಂತೆ ಬಸ್, ಕಾರು,ಆಟೋ, ಬೈಕ್ ಇತರೆ ವಾಹನಗಳ ಸಂಚಾರವಿತ್ತು. ಮರಾಠ ಅಭಿವೃದ್ಧಿ ನಿಗಮ ಹಿಂಪಡೆಯುವಂತೆ
ಹಿರಿಯೂರಿನಲ್ಲಿ ಕರವೇ ಕಾರ್ಯಕರ್ತರು ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.