ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಕೊರೊನಾ ಸೋಂಕು ಧೃಡ!

ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕು ಎಲ್ಲೆಡೆ ಹಬ್ಬುತ್ತಿದ್ದು, ಇದೀಗ ರಾಜಕಾರಣಿಗಳಿಗೆ ಬೆಂಬಿಡದೆ ಕಾಡುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ.

ಕೊರೊನಾ ಸೊಂಕು ಲಕ್ಷಣಗಳು ಕಂಡು ಬಂದ ಹಿನ್ನೆಲೆ, ಸ್ವಯಂ ಪ್ರೇರಿತರಾಗಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಸೊಂಕು ಇರುವುದು ಧೃಡವಾಗಿದೆ. ಈ ಬಗ್ಗೆ ಸ್ವತಃ ಡಿ.ಕೆ ಶಿವಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೇ ಸಂಪರ್ಕದಲ್ಲಿದ್ದವರು ಮುಂಜಾಗ್ರತ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

Leave a Reply

Your email address will not be published.

Send this to a friend